ಛತ್ತೀಸ್‌ಗಢದ ಸುಕ್ಮಾದಲ್ಲಿ ಗುಂಡಿನ ಚಕಮಕಿ, ನಕ್ಸಲೀಯನ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲೀಯ ಮುಖಂಡರೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಂತಗುಫಾ ಪೊಲೀಸ್ ಠಾಣಾ ವ್ಯಾಪ್ತಿಯ ತುಮಲ್‌ಪಾಡ್ ಗ್ರಾಮದ ಬಳಿಯ ಗುಡ್ಡದ ಮೇಲೆ ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮುಂಜಾನೆ ಈ ಎನ್‌ಕೌಂಟರ್ ನಡೆದಿದೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.

ಗುಂಡಿನ ಚಕಮಕಿ ಸ್ಥಗಿತದ ನಂತರ ಸ್ಥಳದಿಂದ ನಕ್ಸಲೀಯನ ಮೃತದೇಹ, ಶಸ್ತ್ರಾಸ್ತ್ರ ಮತ್ತು ಮಾವೋವಾದಿ ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ನಕ್ಸಲೀಯನ ಗುರುತು ಇನ್ನೂ ಪತ್ತೆಯಾಗಿಲ್ಲ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!