ಛತ್ತೀಸ್ ಗಢದಲ್ಲಿ ಇಂದು ಗುಂಡಿನ ಚಕಮಕಿ: ಇಬ್ಬರು ಮಹಿಳಾ ನಕ್ಸಲರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ರಾಜಧಾನಿ ರಾಯ್ ಪುರದಿಂದ 450 ಕಿ.ಮೀ. ದೂರದಲ್ಲಿರುವ ಜಬೇಲಿ, ದುರ್ಧಾ ಮತ್ತು ಮೊಸ್ಲಾ ಗ್ರಾಮಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದೆ. ಜಬೇಲಿ ಎಂಬಲ್ಲಿಯ ಕಾಡಿನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ತಂಡ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ನಕ್ಷಲ್ ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವೇಳೆ ಅವರ ಬಳಿ ಇದ್ದ 12 ಬೋರ್ ಗನ್, 9 ಎಂಎಂ ಪಿಸ್ತೂಲ್, ಕಾರ್ಡೆಕ್ಸ್ ವೈರ್ ಸೇರಿ ಹಲವು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!