ನಕ್ಸಲರ ಅಟ್ಟಹಾಸ: ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಇಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು CRPF ಯೋಧರು ಹುತಾತ್ಮರಾಗಿದ್ದಾರೆ.

ಸುಕ್ಮಾ ಜಿಲ್ಲೆಯ ಜಗರಗುಂದ ಮತ್ತು ಕುಂಡೆಡ್ ಗ್ರಾಮಗಳಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ನಡೆದ ಎನ್ಕೌಂಟರ್​ನಲ್ಲಿ ಡಿಆರ್​ಜಿ ಸಹಾಯಕ ಸಬ್ ಇನ್ಸ್​ಪೆಕ್ಟರ್ ರಾಮುರಾಮ್ ನಾಗ್, ಸಹಾಯಕ ಕಾನ್ಸ್ಟೇಬಲ್ ಕುಂಜ್ರಾಮ್ಜೋಗ ಮತ್ತು ಕಾನ್ಸ್ಟೇಬಲ್ ವಂಜಮ್ ಭೀಮ ಹುತಾತ್ಮರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಸುಕ್ಮಾ ಜಿಲ್ಲೆಯ ಕುಂಡೆಡ್ ಬಳಿ ನಕ್ಸಲೀಯರು ಮತ್ತು CRPF ಯೋಧರ ನಡುವೆ ಎನ್ಕೌಂಟರ್ ನಡೆದಿದೆ.

ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಶನಿವಾರ ಬೆಳಗ್ಗೆ ಜಾಗರಗುಂದ ಪೊಲೀಸ್ ಠಾಣೆಯಿಂದ ಡಿಆರ್​ಜಿ ತಂಡವನ್ನು ಗಸ್ತು ತಿರುಗಲು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!