ಮಲೆನಾಡಲ್ಲಿ ಮತ್ತೆ ನಕ್ಸಲರ ಹೆಜ್ಜೆ ಗುರುತು: ಹೈ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮತ್ತೆ ನಕ್ಸಲರ ಹೆಜ್ಜೆ ಗುರುತು ಕಾಣಸಿಕ್ಕಿದೆ. ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರಲ್ಲಿ ತೀವ್ರ ನಿಗಾವಹಿಲಾಗಿದೆ. ಮುಂದಿನ 5 ದಿನ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಹಾಗೂ ಉಡುಪಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಎನ್.ಎನ್.ಎಫ್. ಗೆ ಸೂಚನೆ ನೀಡಲಾಗಿದೆ. ಸಾಕೇತ್ ರಾಜನ್ ಸಾವಿಗೆ ರೆಡ್ ಸಲ್ಯೂಟ್ ದಿನ ಆಚರಿಸಲು ನಕ್ಸಲರು ತಯಾರಿ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೆಣಸಿನಹಾಡ್ಯ ಸಮೀಪ 2005 ಫೆಬ್ರವರಿ 5ರಂದು ಬೆಳಗಿನ ಜಾವ ನಡೆದಿದ್ದ ಎನ್ಕೌಂಟರ್‌ನಲ್ಲಿ ಸಾಕೇತ್ ರಾಜನ್ ಸಾವಾಗಿದ್ದರು.

ನಕ್ಸಲ್ ನಾಯಕ ಸಾಕೇತ್ ಸಾವಿನ ಬಳಿಕ ಮತ್ತೊಬ್ಬ ನಕ್ಸಲ್ ನಾಯಕ ವಿಕ್ರಮ್ ಗೌಡ ಸಹಚರರೊಂದಿಗೆ ತಲೆಮರೆಸಿಕೊಂಡಿದ್ದನು. ಈಗ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ವಿಕ್ರಮ್ ಗೌಡ ಓಡಾಟದ ಸುಳಿವು ಸಿಕ್ಕಿದೆ. ಆದ್ದರಿಂದ ಸ್ಥಳೀಯರು ನಕ್ಸಲರ ಓಡಾಟದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಕ್ಸಲರ ಓಡಾಟದ ಹಿನ್ನಲೆ ಎ.ಎನ್.ಎಫ್. ನಿಂದ ಕೊಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!