ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್ಗಢದ ಧೌಡೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕ್ಸಲರು ಇಂದು ಮೊಬೈಲ್ ಟವರ್ ಸುಟ್ಟು ಭಸ್ಮ ಮಾಡಿದ್ದಾರೆ.
ಬಿಜಾಪುರದ ಎರಡು ಗ್ರಾಮಗಳಲ್ಲಿ ಅಳವಡಿಸಿದ್ದ ಎರಡು ಮೊಬೈಲ್ ಟವರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ.
ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಮಾತನಾಡಿ, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಮೇ 27ರಂದು ನಾರಾಯಣಪುರದ ಛೋಟೆಡೊಂಗರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಎರಡು ಮಬೈಲ್ ಟವರ್‌ಗಳಿಗೆ ಬೆಂಕಿ ಹಚ್ಚಿದ್ದರು.