ಹೊಸದಿಗಂತ ಡಿಜಿಟಲ್ ಡೆಸ್ಕ್:
ನಯಾಬ್ ಸಿಂಗ್ ಸೈನಿ ಅವರು ಸತತ ಎರಡನೇ ಬಾರಿಗೆ ಹರಿಯಾಣದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ ಮತ್ತು ಪಂಚಕುಲದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಮಾಣ ವಚನ ಭೋದಿಸಿದರು.
ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಅವರ ಪ್ರತಿನಿಧಿಗಳು ಉಪಸ್ಥಿತರಿದ್ದರು.
ತನ್ನ ಆಪ್ತ ಖಟ್ಟರ್ ಅವರನ್ನು ಮುಖ್ಯಮಂತ್ರಿಯಾಗಿ ಬದಲಿಸಿದ ತಿಂಗಳುಗಳ ನಂತರ, ಅಕ್ಟೋಬರ್ 5 ರಂದು ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 90 ಸದಸ್ಯ ಬಲದ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಸೈನಿ ಬಿಜೆಪಿಯನ್ನು ಐತಿಹಾಸಿಕ ವಿಜಯದತ್ತ ಮುನ್ನಡೆಸಿದರು. ಅವರು ಪಕ್ಷಕ್ಕೆ ಸತತ ಮೂರನೇ ಅವಧಿಯನ್ನು ನೀಡಿದ್ದಾರೆ.