October 12, 2026
Monday, October 12, 2026
spot_img

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ನಯನತಾರಾ ದಂಪತಿ

ಹೊಸದಿಂತ ಡಿಜಿಟಲ್‌ ಡೆಸ್ಕ್‌:

ದಕ್ಷಿಣ ಭಾರತದ ಜನಪ್ರಿಯ ನಟಿ, ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ನಯನತಾರಾ ಹಾಗೂ ಅವರ ಪತಿ, ನಿರ್ದೇಶಕ ವಿಘ್ನೇಶ್ ಶಿವನ್ ಬುಧವಾರ ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ, ದೇವರ ದರುಶನ ಪಡೆದರು. ದಂಪತಿ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗವಹಿಸಿ, ಕುಕ್ಕೆ ಸುಬ್ರಹ್ಮಣ್ಯ ದೇವರ ಆಶೀರ್ವಾದ ಪಡೆದರು.

ದೇವರ ದರ್ಶನದ ನಂತರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನಯನತಾರಾ ದಂಪತಿಗೆ ದೇವಾಲಯದ ಪರವಾಗಿ ಸ್ಮರಣಿಕೆಯೊಂದಿಗೆ ಸನ್ಮಾನಿಸಿದರು. ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು, ನೆಚ್ಚಿನ ತಾರಾ ದಂಪತಿಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಪೂಜೆ ವೇಳೆ, ದೇವಾಲಯದ ಅರ್ಚಕರು ಹಾಗೂ ದೇವಸ್ಥಾನ ಸಿಬ್ಬಂದಿ ಅವರ ಸೇವೆಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿದ್ದರು.

Must Read