October 10, 2026
Saturday, October 10, 2026
spot_img

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್‌ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್‌ ಅಹ್ಮದ್‌ ರಾಜೀನಾಮೆ ನೀಡಿದ್ದಾರೆ.

ನಜೀರ್‌ ಅಹ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ.

ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸಿಎಂ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ನಜೀರ್‌ ಅಹ್ಮದ್‌ಗೆ ಡೆಡ್‌ಲೈನ್‌ ನೀಡಿದ್ದರು. ಸಂಜೆಯೊಳಗೆ ರಾಜೀನಾಮೆ ಕೊಡಿ ಎಂದಿದ್ದರು.

ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿಎಂ ಸಿದ್ದರಾಮಯ್ಯಗೆ ಸೂಚಿಸುವುದಾಗಿ ತಿಳಿಸಿದ್ದರು. ಕಡೆ ಗಳಿಗೆಯಲ್ಲಿ ನಜೀರ್ ಅಹಮ್ಮದ್ ರಾಜೀನಾಮೆ ಪತ್ರ ರವಾನಿಸಿದ್ದಾರೆ.

Must Read