ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಬಾಬಾ ಸಿದ್ದಿಕ್ ಅವರನ್ನು ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಲೀಲಾವತಿ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಲೀಲಾವತಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕ್ ಅವರು ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್‌ನಿಂದ ಹೊರಬಂದ ನಂತರ ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.