ಹೊಸದಿಗಂತ ಡಿಜಿಟಲ್ ಡೆಸ್ಕ್;
ಎನ್ಸಿಪಿ ಮುಖಂಡ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದಾರೆ.
ಅ.18(ಶುಕ್ರವಾರ) ರಂದು ಐವರನ್ನು ಬಂಧಿಸುವುದರೊಂದಿಗೆ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ ಒಂಬತ್ತಕ್ಕೆ ಏರಿದೆ.
ಕ್ರೈಂ ಬ್ರಾಂಚ್ ಪೊಲೀಸರು ಮಾಹಿತಿಯ ಆಧಾರದ ಮೇಲೆ ನೆರೆಯ ರಾಯಗಢ ಜಿಲ್ಲೆಯ ಪನ್ವೇಲ್ ಮತ್ತು ಕರ್ಜತ್ ನಲ್ಲಿ ದಾಳಿ ನಡೆಸಿ ಈ ಐದು ಜನರನ್ನು ವಶಕ್ಕೆ ಪಡೆದರು. ಅಪರಾಧಕ್ಕೆ ಸಂಬಂಧಿಸಿದ ಪಿತೂರಿ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ.
ಬಂಧಿತರು ಸಿದ್ದಿಕಿಯನ್ನು ಗುಂಡಿಕ್ಕಿ ಕೊಂದ ಆರೋಪಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಂಬೈನ ಬಾಂದ್ರಾದಲ್ಲಿ ಶಾಸಕ ಪುತ್ರ ಜೀಶಾನ್ ಸಿದ್ದಿಕಿ ಕಚೇರಿ ಬಳಿ ಅ.12 ರಂದು ಬಾಬಾ ಸಿದ್ದಿಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.