ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಉತ್ತರ ಪ್ರದೇಶದಲ್ಲಿ ಓರ್ವ ಶೂಟರ್ ಮತ್ತು ಇಬ್ಬರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.
ಮುಂಬೈ ಪೊಲೀಸ್ ಅಪರಾಧ ವಿಭಾಗ ಮತ್ತು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ಅವರನ್ನು ಮುಂಬೈಗೆ ಕರೆ ತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿ ಶೂಟರ್ ಶಿವ ಕುಮಾರ್ ಮತ್ತು ಇಬ್ಬರು ಶಂಕಿತರನ್ನು ಉತ್ತರ ಪ್ರದೇಶದಿಂದ ವಶಕ್ಕೆ ಪಡೆಯಲಾಗಿದೆʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಿವ ಕುಮಾರ್ ನೇಪಾಳಕ್ಕೆ ಪರಾರಿಯಾಗಿಉವ ಸಿದ್ಧತೆಯಲ್ಲಿ ತೊಡಗಿದ್ದಾಗ ಬಲೆಗೆ ಬಿದ್ದಿದ್ದಾನೆ. ನ. 8ರಂದು ಮುಂಬೈ ಪೊಲೀಸರು ಗೌರವ್ ವಿಲಾಸ್ ಅಪುಣೆ ಎಂಬ ಶೂಟರ್‌ನನ್ನು ಬಂಧಿಸಿದ್ದರು.