September 16, 2026
Wednesday, September 16, 2026
spot_img

NCP ಅಧ್ಯಕ್ಷ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ, ರಾಜ್ಯಸಭಾ ಸಂಸದ ಶರದ್‌ ಪವಾರ್‌ ರೆಗ್ಯುಲರ್‌ ಚೆಕಪ್‌ಗಾಗಿ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶರದ್‌ ಪವಾರ್‌ ಅವರಿಗೆ 85 ವರ್ಷವಾಗಿದೆ. ಎರಡು ದಿನಗಳ ಹಿಂದೆಯೇ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಶರದ್‌ ಪವಾರ್‌ ವ್ಹೀಲ್‌ಚೇರ್‌ನಲ್ಲಿ ಕುಳಿತುಕೊಂಡೇ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ವಯೋಸಹಜ ಸಮಸ್ಯೆಗಳಿದ್ದು, ಅವರು ಆಸ್ಪತ್ರೆಗೆ ದಾಖಲಾದ ಕೂಡಲೇ ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಆದರೆ ಇದು ಬರೀ ರೆಗ್ಯುಲರ್‌ ಚೆಕಪ್‌ ಎಂದು ತಿಳಿದು ಸಮಾಧಾನವಾಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !