ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎನ್ ಸಿ ಆರ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.

50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬುವವರು ದೂರು ನೀಡಿದ್ದರು.

2019 ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ತಕ್ಷಣಕ್ಕೆ 50 ಕೋಟಿ ಹಣ ನೀಡುವಂತೆ ಒತ್ತಾಯಿಸಿದ್ದರು. ಹಣ ಕೊಡಲು ನಿರಾಕರಿಸಿದ ಹಿನ್ನೆಲೆ ನನ್ನ ಉದ್ಯಮ ಹಾಗೂ ನನ್ನ ಜೀವಕ್ಕೆ ಸಂಚಕಾರ ತರುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ವಿಜಯ್ ಟಾಟಾ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!