ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಟುಂಬದೊಂದಿಗೆ ಬಿಡದಿಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣಾ ಪ್ರಚಾರದ ಆರಂಭದಿಂದಲೂ ಚನ್ನಪಟ್ಟಣ ನಿವಾಸಿಗಳು ಜೆಡಿಎಸ್ ಅಭ್ಯರ್ಥಿಗಳನ್ನು ಸ್ವಾಗತಿಸಿದ್ದಾರೆ ಎಂದ ಕುಮಾರಸ್ವಾಮಿ, ರಾಜ್ಯದಲ್ಲಿ ನಡೆಯುವ ಮೂರು ಉಪಚುನಾವಣೆಗಳಲ್ಲಿ ಎನ್‌ಡಿಎ ಎರಡು ಸ್ಥಾನಗಳನ್ನು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.