ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ

ದಿಗಂತ ವರದಿ ರಾಮನಗರ :

ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅದರಂತೆ ಈ ಬಾರಿ ಹೈವೋಲ್ಟೇಜ್​ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಿಂದ ಎನ್​ಡಿಎ ಅಭ್ಯರ್ಥಿ ಅಭ್ಯರ್ಥಿ ಡಾ.‌ಸಿ.ಎನ್ ಮಂಜುನಾಥ್ ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ರಾಮನಗರ‌ದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ ಅವರು, ನಂತರ 10:30‌ರಿಂದ ಮೆರವಣಿಗೆ ಮೂಲಕ ಎಸ್ ಪಿ ಆಪೀಸ್ ಸರ್ಕಲ್​​ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಸಾಗಿ ಬಳಿಕ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಾ.ಸಿ.ಎನ್ ಮಂಜುನಾಥ್ ಅವರ ಧಮ೯ಪತ್ನಿ ಅನುಸೂಯ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ. ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ ಇದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!