ಹೊಸದಿಗಂತ ಕೊಪ್ಪಳ:
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಯನ್ನು ನಿಲ್ಲಿಸಲಾಗುವುದು. ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ನ್ನು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನೀಡಲಾಗಿವುದು. ಈಗಾಗಲೇ ಕ್ಷೇತ್ರದ ಪ್ರತಿಯೊಂದು ಭೂತ್ ಗೆ ತೆರಳಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎನ್ ಡಿ ಎ ಅಭ್ಯರ್ಥಿಯನ್ನು ಗೆಲ್ಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಶಾಸಕ ನೇಮಿರಾಜ್ ನಾಯ್ಕ್, ಮಾಜಿ ಸಚಿವ ನಾಡಗೌಡ, ಬಂಡೆಪ್ಪ ಕಾಶೆಂಪೂರ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್, ಜಿಲ್ಲಾಧ್ಯಕ್ಷ ಸುರೇಶ್ ಭೂಮರೆಡ್ಡಿ ಇದ್ದರು.