ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಭಾನುವಾರ ನಡೆದ ಎನ್ ಡಿಎ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆಯಲ್ಲಿ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಧೈರ್ಯಶಾಲಿ ನಾಯಕತ್ವವನ್ನು ಶ್ಲಾಘಿಸುವ ನಿರ್ಣಯ ಅಂಗೀಕರಿಸಲಾಯಿತು.
ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಿರ್ಣಯ ಪ್ರಸ್ತಾಪಿಸಿ, ಆಪರೇಷನ್ ಸಿಂದೂರ್ ಭಾರತೀಯರ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.
ಮೋದಿಯವರ ನಾಯಕತ್ವವನ್ನು ಶ್ಲಾಘಿಸುತ್ತಾ, ಪ್ರಧಾನಿ ಯಾವಾಗಲೂ ಸಶಸ್ತ್ರ ಪಡೆಗಳನ್ನು ಬೆಂಬಲಿಸಿದ್ದಾರೆ ಮತ್ತು ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ಮೂಲಕ ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುತ್ತಿದ್ದವರಿಗೆ ತಕ್ಕ ಉತ್ತರ ನೀಡಿದೆ ಎಂದು ಎನ್ ಡಿಎ ನಾಯಕರು ಹೇಳಿದ್ದಾರೆ.
ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಜೆ ಪಿ ನಡ್ಡಾ ಸಹ ಎನ್ ಡಿಎನ ಒಂದು ದಿನದ ಸಮಾವೇಶದಲ್ಲಿ ಭಾಗವಹಿಸಿದ್ದರು. ಅಲ್ಲದೆ ಸುಮಾರು 19 ಮುಖ್ಯಮಂತ್ರಿಗಳು ಮತ್ತು ಅನೇಕ ಉಪಮುಖ್ಯಮಂತ್ರಿಗಳು ಭಾಗವಹಿಸಿದ್ದರು.