ಮೋದಿಯನ್ನು 18ನೇ ಲೋಕಸಭೆಯ ನಾಯಕನನ್ನಾಗಿ ಆಯ್ಕೆ ಮಾಡಿದ ಎನ್​ಡಿಎ ಸಂಸದರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಧಾನಿ ನರೇಂದ್ರ ಮೋದಿಯನ್ನು18ನೇ ಲೋಕಸಭೆಯ ನಾಯಕನ್ನಾಗಿ ಎನ್​ಡಿಎ ಸಂಸದರು ಆಯ್ಕೆ ಮಾಡಿದ್ದಾರೆ.

ಈ ಮೊದಲು ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಇಂದು ಅಧಿಕೃತವಾಗಿ ಎನ್​ಡಿಎಯ ಎಲ್ಲಾ ಸಂಸದರು ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.

ಇನ್ನೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!