ಜುಲೈ 10ಕ್ಕೆ ಬೆಂಗಳೂರಿಗೆ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಜುಲೈ 10ರಂದು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ಶಾಸಕರು, ಸಂಸದರ ಮತಯಾಚನೆ ಮಾಡಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮತ್ತು ಪಾಂಡಿಚೇರಿಯ ಉಸ್ತುವಾರಿ ನಿರ್ಮಲ್‍ಕುಮಾರ್ ಸುರಾಣಾ, ರಾಷ್ಟ್ರಪತಿ ಚುನಾವಣೆಗೆ ಎನ್‍ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಅವರು ಸರಳತೆಯನ್ನು ಮೈಗೂಡಿಸಿಕೊಂಡವರು. ಬುಡಕಟ್ಟು ಜನಾಂಗಕ್ಕೆ ಸೇರಿದ ಅವರು, ಎರಡು ದಶಕಕ್ಕೂ ಹೆಚ್ಚು ಕಾಲ ರಾಜಕೀಯ ಮತ್ತು ಸಾಂವಿಧಾನಿಕ ಹುದ್ದೆಗಳಲ್ಲಿ ಮೇಲೇರುತ್ತಲೇ ಬಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅಂದು ಸಂಜೆ 5 ಗಂಟೆಗೆ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರ ಸಭೆ ಆಯೋಜನೆ ಮಾಡಲಾಗಿದ್ದು, ಈ ಸಭೆಯಲ್ಲಿ ಭಾಗಿಯಾಗಿ ಮುರ್ಮು ಮತ ಯಾಚಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!