Tuesday, October 14, 2025

ಬಿಹಾರ ಚುನಾವಣೆಗೆ ಎನ್ ಡಿಎ ಸೀಟು ಹಂಚಿಕೆ ಫೈನಲ್: ಬಿಜೆಪಿ, ಜೆಡಿಯು 101 ಸ್ಥಾನ, ಚಿರಾಗ್ ಪಾರ್ಟಿಗೆ ಎಷ್ಟು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಗೆ ಎನ್ ಡಿಎ ಸೀಟು ಹಂಚಿಕೆಯನ್ನು ಭಾನುವಾರ ಅಂತಿಮಗೊಳಿಸಿದೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಎನ್ ಡಿಎ ಮಿತ್ರಪಕ್ಷಗಳಾದ ಬಿಜೆಪಿ, ಜೆಡಿಯು, ಎಲ್ ಜೆಪಿ (ಆರ್) ಆರ್ ಎಲ್ ಎಂ ಮತ್ತು ಹೆಚ್ ಎಎಂ ನಡುವಿನ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಯಿತು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ಹಂಚಿಕೊಂಡಿದ್ದಾರೆ.

ಬಿಜೆಪಿ ಹಾಗೂ ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (LJP R) 29 ಸೀಟುಗಳನ್ನು ಪಡೆದುಕೊಂಡಿದೆ. ಉಳಿದಂತೆ ರಾಷ್ಟ್ರೀಯ ಲೋಕ ಸಮತಾ ಪಕ್ಷ( RLM) ಆರು ಸ್ಥಾನಗಳಲ್ಲಿ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚ್ (HAM) 6 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ ಎಂದು ತಿಳಿಸಿದ್ದಾರೆ.

ಬಿಹಾರ ಮತ್ತೆ ಎನ್ ಡಿಎ ಸರ್ಕಾರಕ್ಕೆ ಸಜ್ಜಾಗಿದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳುವ ಮೂಲಕ ಸೀಟು ಹಂಚಿಕೆ ಸೂತ್ರವನ್ನು ಘೋಷಿಸಿದ್ದಾರೆ.

error: Content is protected !!