ಎನ್‌ಡಿಎ 400ಕ್ಕೂ ಹೆಚ್ಚು ಸೀಟು ಗೆಲ್ಲಬೇಕು: ಕಾರಣ ತಿಳಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿದ್ದು, ಇದಕ್ಕೆ ಕಾರಣ ಏನು ಎಂಬುವುದನ್ನು ಪ್ರಧಾನಿ ಮೋದಿ ಹೇಳಿದ್ದಾರೆ.

ಮಂಗಳವಾರ ಮಧ್ಯಪ್ರದೇಶದ ಧಾರ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ನರೇಂದ್ರ ಮೋದಿ, ಬಿಜೆಪಿ ನೇತೃತ್ವದ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್ ಪಕ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಮರಳಿತರುವುದನ್ನು ತಡೆಯಬಹುದು. ಅಯೋಧ್ಯೆಯ ರಾಮ ಮಂದಿರಕ್ಕೆ ಬಾಬರಿ ಬೇಗ ಹಾಕುವುದನ್ನು ತಡೆಯಬಹುದು ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಈಗಾಗಲೇ ಸಂಸತ್ತಿನಲ್ಲಿ 400 ಪ್ಲಸ್ ಸ್ಥಾನಗಳನ್ನು ಹೊಂದಿದೆ ಎಂಬುದನ್ನು ದೇಶದ ಜನರು ತಿಳಿದುಕೊಳ್ಳುವುದು ಬಹಳ ಮುಖ್ಯ. ನಾವು ಈ ಸಂಖ್ಯೆಯನ್ನು 370 ನೇ ವಿಧಿಯನ್ನು (ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ) ರದ್ದುಗೊಳಿಸಲು ಬಳಸಿದ್ದೇವೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರ ಕೊಡುಗೆಗಳನ್ನು ಕಡೆಗಣಿಸುತ್ತಿದೆ .  ವಿರೋಧ ಪಕ್ಷವು ಸಂವಿಧಾನವನ್ನು ರಚಿಸುವಲ್ಲಿ ಅವರ ಕನಿಷ್ಠ ಪಾಲ್ಗೊಳ್ಳುವಿಕೆಯನ್ನು ಪ್ರತಿಪಾದಿಸಲು ಪ್ರಾರಂಭಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಪರಿವಾರವು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ತೀವ್ರವಾಗಿ ದ್ವೇಷಿಸುತ್ತದೆ. ಎನ್ ಡಿಎ 400 ಲೋಕಸಭಾ ಸ್ಥಾನಗಳನ್ನು ಪಡೆದರೆ ಸಂವಿಧಾನವನ್ನು ಬದಲಾಯಿಸುತ್ತಾರೆ ಎಂದು ಕಾಂಗ್ರೆಸ್ ವದಂತಿಗಳನ್ನು ಹಬ್ಬಿಸುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಮೋದಿಯವರು 400 ಸೀಟುಗಳನ್ನು ಬಯಸುತ್ತಾರೆ. ಯಾಕೆಂದರೆ ಅವರು(ಕಾಂಗ್ರೆಸ್) 370 ನೇ ವಿಧಿಯನ್ನು ಮತ್ತೆ ತರಬಾರದು. ಮೋದಿಯವರು 400 ಸ್ಥಾನಗಳನ್ನು ಬಯಸುತ್ತಾರೆ ಯಾಕೆಂದರೆ ಕಾಂಗ್ರೆಸ್ ಅಯೋಧ್ಯೆಯ ರಾಮಮಂದಿರಕ್ಕೆ ಬಾಬರಿ ಬೀಗ ಹಾಕುವುದನ್ನು ತಡೆಯಬಹುದು ಎಂದು ಅವರು ಹೇಳಿದರು.

ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಲಾಭಕ್ಕಾಗಿ ಒಬಿಸಿ ಕೋಟಾದ ದರೋಡೆಯನ್ನು ತಡೆಯಲು ಲೋಕಸಭೆಯಲ್ಲಿ 400 ಸ್ಥಾನಗಳನ್ನು ಬಯಸುವುದಾಗಿ ಮೋದಿ ಹೇಳಿದರು.

ನಾವು ಈ 400-ಪ್ಲಸ್ ಸೀಟುಗಳನ್ನು 10 ವರ್ಷಗಳ ಕಾಲ SC / ST ಕೋಟಾವನ್ನು ವಿಸ್ತರಿಸಲು, ಮೊದಲ ಬಾರಿಗೆ ದೇಶದ ರಾಷ್ಟ್ರಪತಿಯಾಗಿ ಬುಡಕಟ್ಟು ಮಹಿಳೆಯನ್ನು ನೇಮಿಸಲು ಮತ್ತು ಮಹಿಳೆಯರಿಗೆ ಮೀಸಲಾತಿ ಒದಗಿಸಲು ಬಳಸಿದ್ದೇವೆಎಂದು ಮೋದಿ ಹೇಳಿದರು. ಕಾಂಗ್ರೆಸ್ ಮತ್ತು ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟದ ಪ್ರತಿಯೊಂದು ಪಿತೂರಿಯನ್ನು ತಡೆಯಲು ತಾನು 400 ಸ್ಥಾನಗಳನ್ನು ಕೇಳುತ್ತಿದ್ದೇನೆ ಎಂದು ಪ್ರಧಾನಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!