ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಸರಗೋಡು ಲೋಕಸಭಾ ಚುನಾವಣೆಯ ಫಲಿತಾಂಶ ಅಂತಿಮ ಹಂತದಲ್ಲಿದ್ದು, ಕೇರಳದಲ್ಲಿ ಈ ಬಾರಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟವು 2 ಸ್ಥಾನಗಳನ್ನು ಗಳಿಸುವ ಎಲ್ಲಾ ಸಾಧ್ಯತೆ ಕಂಡುಬರುತ್ತಿದೆ.
ತೃಶೂರು ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಮತ್ತು ತಿರುವನಂತಪುರ ಲೋಕಸಭಾ ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್ ಗೆಲುವಿನತ್ತ ಮುಖ ಮಾಡಿದ್ದಾರೆ. ಸುರೇಶ್ ಗೋಪಿ 69,112 ಮತಗಳ ಮುನ್ನಡೆ ಸಾಧಿಸಿದ್ದಾರೆ. ರಾಜೀವ್ ಚಂದ್ರಶೇಖರ್ 16,880 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.