ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ: ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರ ಸಾಥ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು(ಶುಕ್ರವಾರ) ಮಧ್ಯಾಹ್ನ ದೆಹಲಿಯ ಸಂಸತ್‌ ಭವನದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಕೇಂದ್ರ ಸಂಪುಟ ಸಚಿವರು ಬಿಜೆಪಿ ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮೊದಲು ಸಂಸತ್‌ ಭವನದ ಬಳಿಯಿರುವ ಮಹಾತ್ಮ ಗಾಂಧೀ ಹಾಗೂ ಅಂಬೇಡ್ಕರ್‌ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸೂಚಿಸಿದರು. ಬಳಿಕ ಬಿಜೆಪಿ ನಾಯಕರೊಂದಿಗೆ ಸಂಸತ್‌ ಭವನಕ್ಕೆ ಆಗಮಿಸಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಜೂನ್ 27 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಯಶವಂತ್ ಸಿನ್ಹಾ ಅವರು ನಾಮಪತ್ರ ಸಲ್ಲಿಸುವ ವೇಳೆ ರಾಜ್ಯದ ಪ್ರಮುಖ ನಾಯಕರು ಹಾಜರಿರಲು ಕಾಂಗ್ರೆಸ್ ಸೂಚಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ದೆಹಲಿಗೆ ತೆರಳುವ ಸಾಧ್ಯತೆಗಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!