ಪಾಕ್‌ ನೂತನ ಪ್ರಧಾನಿಗೆ ಮೋದಿ ಶುಭಾಶಯ, ಅಭಿವೃದ್ಧಿಯೇ ನಮ್ಮ ಗುರಿ ಎಂದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಾಕಿಸ್ತಾನದ ನೂತನ ಪ್ರಧಾನಿ ಪಿಎಂಎಲ್ (ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಶುಭಾಶಯ ತಿಳಿಸಿದ್ದಾರೆ. ಟ್ವೀಟ್‌ ಮೂಲಕ ಷರೀಪ್‌ ಅವರನ್ನು ಅಭಿನಂದಿಸಿದ್ದಾರೆ. ಭಾರತ ಯಾವಾಗಲೂ ಶಾಂತಿ ಮತ್ತು ಸೌಹಾರ್ದತೆಯನ್ನು ಬಯಸುತ್ತದೆ ಮತ್ತು ದೇಶವನ್ನು ಅಭಿವೃದ್ಧಿಯ ದಿಕ್ಕಿನಲ್ಲಿ ಕೊಂಡೊಯ್ಯಲು ಮುಂಬರುವ ಸವಾಲುಗಳನ್ನು ಎದುರಿಸಲು ಸದಾ ಸಿದ್ಧವಾಗಿದೆ. ಭಾರತ ಶಾಂತಿ-ಪ್ರೀತಿಯ ದೇಶ, ನಾವು ಭಯೋತ್ಪಾದನೆಯನ್ನು ಮೆಟ್ಟಿ ನಿಂತು ಅಭಿವೃದ್ದಿಯ ಕಡೆ ಗಮನ ಹರಿಸುತ್ತೇವೆ. ನಮ್ಮ ಪ್ರಜೆಗಳ ಶ್ರೇಯಸ್ಸೇ ನಮ್ಮಗುರಿ ಎಂದು ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌ ಮಾಡಿದ್ದಾರೆ.

ಅವಿಶ್ವಾಸ ಗೊತ್ತುವಳಿಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸೋಲನುಭವಿಸಿದ ಬಳಿಕ ಮೈತ್ರಿಕೂಟದ ಎಲ್ಲಾ ವಿರೋಧ ಪಕ್ಷಗಳು ಪಿಎಂಎಲ್ (ಎನ್) ಅಧ್ಯಕ್ಷ ಶಹಬಾಜ್ ಷರೀಫ್ ಅವರನ್ನು ಪಾಕಿಸ್ತಾನದ ಪ್ರಧಾನಿಯಾಗಿ ನಾಮನಿರ್ದೇಶನ ಮಾಡಿದೆ. ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ವಿಶೇಷ ಸಭೆ ಕರೆದು. ಸಭೆಯಲ್ಲಿ ಹೊಸ ಪ್ರಧಾನಿಯಾಗಿ ಶಹಬಾಜ್ ಷರೀಫ್ ಅವರ ಆಯ್ಕೆಯನ್ನು ಅಧಿಕೃತಗೊಳಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!