ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಸೆಪ್ಟೆಂಬರ್ 12ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತಾ – ಪ್ರವೇಶ ಪರೀಕ್ಷೆಯನ್ನು (ನೀಟ್-ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸೆ.12 ರಂದು ಹಲವು ಪರೀಕ್ಷೆಗಳು ನಿಗದಿಯಾಗಿರುವ ಕಾರಣ ನೀಟ್ ನ್ನು ಮುಂದೂಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಖಾನ್ ವಿಲ್ಕರ್, ಹೃಷಿಕೇಶ್ ರಾಯ್ ಹಾಗೂ ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಪರೀಕ್ಷಾ ವಿಚಾರದಲ್ಲಿ ನ್ಯಾಯಾಂಗ ಹಸ್ತಕ್ಷೇಪ ಮಾಡಲು ಇಚ್ಚಿಸುವುದಿಲ್ಲ, ಅಲ್ಲದೇ, ಪರೀಕ್ಷೆಯನ್ನು ಮರುನಿಗದಿಗೊಳಿಸುವುದೂ ಸಹ ನ್ಯಾಯ ಸಮ್ಮತವಲ್ಲ ಎಂದು ತಿಳಿಸಿದೆ.
ಬೇರೆ ಪರೀಕ್ಷೆಗಳು ಅದೇ ದಿನ ಇದ್ದರೆ ಆದ್ಯತೆ ಮೇರೆಗೆ ವಿದ್ಯಾರ್ಥಿಗಳು ಒಂದನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ಹೇಳಿದೆ.
ಪರೀಕ್ಷಾ ದಿನಾಂಕಗಳ ಬದಲಾವಣೆ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೇ ಮನವಿ ಸಲ್ಲಿಸುವಂತೆ ನ್ಯಾಯಪೀಠ ಸೂಚಿಸಿದೆ.