ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ನಲ್ಲಿ ಮೃತಪಟ್ಟ ಕನ್ನಡಿಗ, ಹಾವೇರಿ ಜಿಲ್ಲೆ ಚಳಗೇರಿ ಗ್ರಾಮದ ನವೀನ್ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಿಸಲು ಅಗತ್ಯ ನೆರವು ಕಲ್ಪಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ರಷ್ಯಾದ ಬಾಂಬ್ ದಾಳಿಗೆ ಬಲಿಯಾಗಿರುವ ನವೀನ್ ಕುಟುಂಬಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರೆ ಮಾಡಿ ನವೀನ್ ತಂದೆಗೆ ಸಾಂತ್ವನ ಹೇಳಿದರು.ಈ ವೇಳೆ ಶೇಖರಪ್ಪ ಅವರಿಗೆ ಭರವಸೆ ನೀಡಿದ್ದಾರೆ.
ನವೀನ್ ಕುಟುಂಬಕ್ಕೆ ಧೈರ್ಯತುಂಬಿದ ಯಡಿಯೂರಪ್ಪ, ಕುಟುಂಬದ ಜೊತೆ ನಾವಿದ್ದೇವೆ ಎನ್ನುವ ಅಭಯ ನೀಡಿದ್ದಾರೆ.