ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ನೀರಜ್‌ ಚೋಪ್ರಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದ ಬಹುನಿರೀಕ್ಷಿತ ಕನಸು ನನಸಾಗಿದೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023ರಲ್ಲಿ ಚಿನ್ನದ ಪದಕ ಜಯಿಸಿ ಹೊಸ ಇತಿಹಾಸ ಬರೆದಿದ್ದಾರೆ ನೀರಜ್‌ ಚೋಪ್ರಾ.

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕವನ್ನು ಗೆದ್ದುಕೊಟ್ಟು, ಭಾರತದ ಧ್ವಜವನ್ನು ಹಾರಿಸಿದರು. ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಅವರು 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.

ಮತ್ತು ಪಾಕಿಸ್ತಾನದ ಅರ್ಷದ್ ನದೀಮ್ ಜಾವೆಲಿನ್ ಅನ್ನು 87.82 ಮೀಟರ್ ಎಸೆದು ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಜಾಕೋಬ್ ವುಡ್ ಲೆಜ್ಕ್ ಜಾವೆಲಿನ್ ಅನ್ನು 86.67 ಮೀಟರ್ ಎಸೆದು ಕಂಚಿನ ಪದಕ ಗೆದ್ದರು.

2016ರಲ್ಲಿ 20 ವರ್ಷದೊಳಗಿನವರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಬೆಳಕಿಗೆ ಬಂದಿದ್ದ ನೀರಜ್ ಚೋಪ್ರಾ, ಈ ಏಳು ವರ್ಷಗಳ ಅವಧಿಯಲ್ಲಿ ದೇಶವೇ ಹೆಮ್ಮೆ ಪಡುವಂತೆ ಹಲವು ಯೋಜನೆಗಳನ್ನು ಸಾಧಿಸಿದ್ದಾರೆ. ಇದೇ ವರ್ಷ ಭುವನೇಶ್ವರದಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಭಾರತಕ್ಕೆ ಚಿನ್ನವನ್ನೂ ತಂದುಕೊಟ್ಟಿದ್ದರು. 2018 ರ ಏಷ್ಯನ್ ಗೇಮ್ಸ್ ಮತ್ತು 2018 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!