ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಸ್ಟಾರ್ ಆಟಗಾರ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಚೋಪ್ರಾ ಅವರಿಗೆ ಅನೇಕ ಗಣ್ಯರು ಅಭಿನಂದಿಸಿದ್ದು, ದೇಶದ ಲಕ್ಷಾಂತರ ಯುವಕರಿಗೆ ನೀರಜ್ ಚೋಪ್ರಾ ಗೆಲುವು ಸ್ಫೂರ್ತಿ ನೀಡಲಿದೆ ಎಂದು ರಾಷ್ಟ್ರತಿ ದ್ರೌಪದಿ ಮರ್ಮು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿರುವ ಅವರು,ʼಜಾವೆಲಿನ್ ಥ್ರೋ ಸ್ಪರ್ಧಿ ಚೋಪ್ರಾ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅವರ ಕ್ರೀಡಾ ಬದುಕು ಇಂತಹ ಇನ್ನಷ್ಟು ಸಾಧನೆಗಳೊಂದಿಗೆ ಬೆಳಗಲಿ’ ಎಂದು ಹೇಳಿದ್ದಾರೆ.
ʼಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವದೊಂದಿಗೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ. ಚೋಪ್ರಾ ಅವರ ಅತ್ಯುತ್ತಮ ಪ್ರದರ್ಶನ ದೇಶದ ಲಕ್ಷಾಂತರ ಯುವಕರಿಗೆ ಸ್ಫೂರ್ತಿ ನೀಡುತ್ತದೆ’ ಎಂದು ಮುರ್ಮು ಅವರು ತಿಳಿಸಿದ್ದಾರೆ.
ಭಾನುವಾರ ರಾತ್ರಿ ಬುಡಾಪೆಸ್ಟ್ನಲ್ಲಿ ನಡೆದ ಫೈನಲ್ನಲ್ಲಿ ನೀರಜ್, ಜಾವೆಲಿನ್ ಅನ್ನು 88.17 ಮೀ. ದೂರ ಎಸೆಯುವ ಮೂಲಕ ಅಗ್ರಸ್ಥಾನ ಪಡೆದುಕೊಂಡಿದ್ದರು.
ಈ ಮೂಲಕ ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನಲ್ಲಿ ಭಾರತಕ್ಕೆ ದೊರೆತ ಮೊಟ್ಟ ಮೊದಲ ಚಿನ್ನದ ಪದಕ ಇದಾಗಿದೆ.