ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ನಿವಾಸಿಯಾಗಿರುವ ವಿದ್ಯಾರ್ಥಿನಿ ನಿಶಾ ಅಹಿರ್ (22) ಮಹಾವೀರ್ ನಗರದ ಹಾಸ್ಟೆಲ್‌ನಲ್ಲಿ ವಾಸವಿದ್ದಳು. ಇಲ್ಲಿಯೇ ಈಕೆ ಬುಧವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಪರ್ಧಾತ್ಮಕ ಪರೀಕ್ಷೆಯ ಒತ್ತಡಕ್ಕೆ ಸಿಲುಕಿ ಕೋಟದಲ್ಲಿ ಈ ವರ್ಷ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ಪ್ರಸಕ್ತ ವರ್ಷದಲ್ಲಿಯೇ ಅಧಿಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ.