ನೀಟ್‌ ಪರೀಕ್ಷಾ ಆಕಾಂಕ್ಷಿ ಆತ್ಮಹತ್ಯೆಗೆ ಶರಣು, ವರ್ಷದಲ್ಲಿ 25ನೇ ಪ್ರಕರಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ.

ರಾಂಚಿಯ ನಿವಾಸಿಯಾಗಿರುವ ವಿದ್ಯಾರ್ಥಿನಿಯು ನಗರದ ಬ್ಲೇಜ್ ಹಾಸ್ಟೆಲ್‌ನಲ್ಲಿ ವಾಸವಿದ್ದಳು. ಇಲ್ಲಿಯೇ ಈಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಪರ್ಧಾತ್ಮಕ ಪರೀಕ್ಷೆಯ ಒತ್ತಡಕ್ಕೆ ಸಿಲುಕಿ ಕೋಟದಲ್ಲಿ ಈ ವರ್ಷ 25 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿಯೇ ಅಧಿಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿರುವುದು ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!