ರಾಜಸ್ಥಾನದಲ್ಲಿ ನೀಟ್​ ಆಕಾಂಕ್ಷಿ ಆತ್ಮಹತ್ಯೆ, ವರ್ಷದಲ್ಲಿ 28ನೇ ಪ್ರಕರಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಸ್ಥಾನದ ಕೋಟಾದಲ್ಲಿ ಮತ್ತೊಬ್ಬ ನೀಟ್‌ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ಒಂದೇ ವರ್ಷದಲ್ಲಿ ನಡೆದ 28ನೇ ಪ್ರಕರಣ ಇದಾಗಿದೆ.

ಪಶ್ಚಿಮ ಬಂಗಾಳ ಮೂಲದ ಫೌರಿದ್ ಹುಸೇನ್ ಮೃತ ವಿದ್ಯಾರ್ಥಿ. ನೀಟ್‌ ಆಕಾಂಕ್ಷಿಯಾಗಿದ್ದ ಹುಸೇನ್‌, ಕೋಟಾದ ವಕ್ಫ್ ನಗರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಹುಸೇನ್ ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಇತರ ಕೆಲ ವಿದ್ಯಾರ್ಥಿಗಳು ಕೂಡ ಇದ್ದರು. ಆದರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಲವು ಬಾರಿ ಫೋನ್ ಮಾಡಿದರೂ ರಿಸೀವ್ ಆಗದ ಕಾರಣ ಸ್ನೇಹಿತರು ಮನೆ ಬಳಿ ಬಂದಿದ್ದಾರೆ. ಆಗ ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಹೀಗಾಗಿ ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ
ಪೊಲೀಸರು ಸ್ಥಳಕ್ಕಾಗಮಿಸಿದ್ದು, ಬಾಗಿಲು ತೆರೆದು ನೋಡಿದಾಗ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!