ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪರೀಕ್ಷೆಯ ಸಂದರ್ಭದಲ್ಲಿ ಒಳಉಡುಪು ತೆಗೆಯುವಂತೆ ಹೇಳಲಾದ ವಿದ್ಯಾರ್ಥಿನಿಯರಿಗೆ ಪುನಃ ಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಘ (NTA) ಹೇಳಿದೆ.
ಸೆಪ್ಟೆಂಬರ್ 4 ರಂದು ಪರೀಕ್ಷೆಯನ್ನು ತೆಗೆದುಕೊಳ್ಳುವ ಆಯ್ಕೆಯನ್ನು ನೀಡಲಾಗುವುದು. ಈ ಸಂಬಂಧ ದೃಢೀಕೃತ ಇಮೇಲ್ ಅನ್ನು ವಿದ್ಯಾರ್ಥಿಗಳಿಗೆ ಕಳುಹಿಸಿದೆ ಎಂದು ಮೂಲಗಳು ವರದಿ ಮಾಡಿವೆ.
ಈ ಹಿಂದೆ ಕೇರಳದ ಕೊಲ್ಲಂ ಜಿಲ್ಲೆಯ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ಯುವತಿಯರಿಗೆ ಒಳಉಡುಪುಗಳನ್ನು ತೆಗೆಯುವಂತೆ ಹೇಳಲಾಗಿದೆ ಎಂದು ವರದಿಗಳಾಗಿದ್ದವು.
ಜುಲೈನಲ್ಲಿ, ವ್ಯಕ್ತಿಯೊಬ್ಬರು ಚಾತಮಂಗಲಂನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ತಮ್ಮ ಮಗಳು ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಬ್ರಾಗಳನ್ನು ತೆಗೆಯುವಂತೆ ಹೇಳಿದ್ದರು ಎಂದು ಕೊಟ್ಟಾರಕರ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಪ್ರಸ್ತುತ ಅಂತಹ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಘ ಹೇಳಿದೆ.