ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸುಪ್ರೀಂಕೋರ್ಟ್ಗೆ ತಿಳಿಸಿದ್ದು, ಈಗಾಗಲೇ ನಡೆದಿರುವ ಪರೀಕ್ಷೆಯನ್ನು ಅಮಾನ್ಯಗೊಳಿಸುವುದಾಗಲಿ ಅಥವಾ ಮರು ಪರೀಕ್ಷೆ ನಡೆಸುವ ಉದ್ದೇಶವಾಗಲೀ ಸರ್ಕಾರಕ್ಕಿಲ್ಲ ಎಂದು ಹೇಳಿದೆ.
ಜೊತೆಗೆ ಬರೋಬ್ಬರಿ 24ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದ ಈ ಪರೀಕ್ಷೆಯಲ್ಲಿ ಅಷ್ಟು ದೊಡ್ಡ ಮಟ್ಟದಲ್ಲಿ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.
ನೀಟ್ ಅಕ್ರಮದ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಇಂದು ವಿಚಾರಣೆ ನಡೆದಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ತನ್ನ ಅಫಿಡವಿಟ್ ಸಲ್ಲಿಸಿದೆ. 2024 ರ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು ಗಂಭೀರವಾಗಿ ಅಪಾಯಕ್ಕೆ ಕಾರಣವಾಗುತ್ತದೆ. ಈ ಪರೀಕ್ಷೆಗೆ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರಿಗೆ ಇದರಿಂದ ಅನ್ಯಾಯ ಆಗುತ್ತದೆ. ದೇಶವ್ಯಾಪಿ ಈ ಅಕ್ರಮ ನಡೆಯದೇ ಇರುವಾಗ ಪರೀಕ್ಷೆ ರದ್ದುಗೊಳಿಸುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.
ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೇಳಿಕೊಂಡಿದೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ನೀಟ್ ಯುಜಿ ಪರೀಕ್ಷೆಯನ್ನು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಡೆಸುತ್ತದೆ.
ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳ ಆರೋಪಗಳಿಂದಾಗಿ ನೀಟ್ ಪರೀಕ್ಷೆ ವಿರುದ್ಧ ವ್ಯಾಪಕ ಪ್ರತಿಭಟನೆಗಳು ದೇಶದಾದ್ಯಂತ ನಡೆಯುತ್ತಿವೆ. ಜೂನ್ 11 ರಂದು ಸುಪ್ರೀಂಕೋರ್ಟ್ ಪರೀಕ್ಷೆಯನ್ನು ಹೊಸದಾಗಿ ನಡೆಸುವ ಮನವಿಯ ವಿಚಾರಣೆಯ ಸಂದರ್ಭದಲ್ಲಿ, NEET-UG ಯ ಪಾರದರ್ಶಕತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಕೇಂದ್ರ ಮತ್ತು NTA ಯಿಂದ ಪ್ರತಿಕ್ರಿಯೆಗಳನ್ನು ಕೋರಿತು. ಆದರೆ, ಯಶಸ್ವಿ ಅಭ್ಯರ್ಥಿಗಳ ಕೌನ್ಸೆಲಿಂಗ್ಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಜುಲೈ 8 ರಂದು ಮರುಪರೀಕ್ಷೆ ಮತ್ತು ಆಪಾದಿತ ಅವ್ಯವಹಾರಗಳ ಬಗ್ಗೆ ಸಂಪೂರ್ಣ ತನಿಖೆ ಸೇರಿದಂತೆ ವಿವಿಧ ರೀತಿಯ ಪರಿಹಾರಗಳನ್ನು ಕೋರಿ ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆಗೆ ನಿಗದಿಪಡಿಸಿದ್ದಾರೆ.
Sir we are wrote exam very well plz not conduct re exam this is our life plz sir