ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ರೂಪದರ್ಶಿ ಶಹನಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇರಳದ ಕೋಯಿಕ್ಕೋಡ್‌ನಲ್ಲಿ ರೂಪದರ್ಶಿ ಶಹನಾ (20) ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕೋಯಿಕ್ಕೋಡ್‌ನ ಪರಂಬಿಲ್ ಬಜಾರ್‌ನಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಗುರುವಾರ ರಾತ್ರಿ 11.30ರ ಸುಮಾರಿಗೆ ಕಿಟಕಿಯ ಗ್ರಿಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಶಹನಾ ಕಾಸರಗೋಡು ಮೂಲದವರಾಗಿದ್ದಾರೆ. ಅವರ ಸಾವಿನ ಬಗ್ಗೆ ಆಕೆಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಕೆಯ ಪತಿ ಸಜ್ಜದ್ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!