NEET-PG-22 ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

NEET-PG-22 ಪರೀಕ್ಷೆ ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಈ ಕುರಿತು ಅರ್ಜಿ ವಿಚಾರಣೆಯನ್ನು ಕೈಗೊಂಡ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠವು, ವೈದ್ಯರ ಅಲಭ್ಯತೆಯಾಗಿ ರೋಗಿಗಳ ಆರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅವರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದೆ.
ಇತ್ತ ಒಂದು ವರ್ಗದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವುದನ್ನು ಬಯಸಿದರೆ, ಇನ್ನೊಂದು ವರ್ಗದಲ್ಲಿರುವ ಎರಡು ಲಕ್ಷದ ಆರು ಸಾವಿರ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ತಯಾರಾಗಿದ್ದಾರೆ. ಅವರ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದೆ.
ಈಗಾಗಲೇ ಸಾಂಕ್ರಾಮಿಕ ರೋಗದಿಂದಾಗಿ ಹಳಿತಪ್ಪಿದ ದೇಶವು ಹಳಿಗಳ ಬರುತ್ತಿದೆ ಇದರ ನಡುವೆ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುವಂತೆ ವೇಳಾಪಟ್ಟಿಯನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಹಾಗಾಗಿ ನ್ಯಾಯಾಲಯ ನಿಗದಿಪಡಿಸಿದ ಸಮಯ ವೇಳಾಪಟ್ಟಿಯನ್ನು ಅನುಸರಿಸಬೇಕು ಎಂದುತಿಳಿಸಿದೆ.
ಸದ್ಯ ನಡೆಯುತ್ತಿರುವ NEET-PG 2021ರ ಕೌನ್ಸೆಲಿಂಗ್​ನೊಂದಿಗೆ ಕ್ಲ್ಯಾಶ್​ ಆಗುವ ಕಾರಣಕ್ಕೆ ಮೇ 21ರಂದು ನಡೆಯಲಿರುವ (NEET-PG) 2022ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ವೈದ್ಯರು ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!