September 19, 2026
Saturday, September 19, 2026
spot_img

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ತನಿಖೆಗೆ ಕೇಂದ್ರ ಸರಕಾರ ಆದೇಶ, 45 ಮಂದಿ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್ ಯುಜಿ’ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿದ್ದು, ಈ ಬೆನ್ನಲ್ಲೇ ಸಮಗ್ರ ತನಿಖೆಗಾಗಿ ಕೇಂದ್ರ ಸರ್ಕಾರವು ಸಿಬಿಐ ತನಿಖೆಗೆ ಆದೇಶಿಸಿದೆ.

ಮೇ 3 ರಂದು ನಡೆದಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಇದರ ನಡುವೆ ರಾಜಸ್ಥಾನ ಪೊಲೀಸರ ವಿಶೇಷ ತಂಡವು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾಸ್ಟರ್‌ಮೈಂಡ್ ಹಾಗೂ ಓರ್ವ ಎಂಬಿಬಿಎಸ್ ವಿದ್ಯಾರ್ಥಿ ಸಹಿತ 45 ಮಂದಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಪ್ರಾಥಮಿಕ ತನಿಖೆ ಪ್ರಕಾರ, ಪರೀಕ್ಷಾ ಅಕ್ರಮದ ಹಿಂದೆ ವ್ಯವಸ್ಥಿತ ಜಾಲವೊಂದು ಕೆಲಸ ಮಾಡುತ್ತಿರುವುದು ತಿಳಿದುಬಂದಿದ್ದು, ಪ್ರಶ್ನೆ ಪತ್ರಿಕೆಯನ್ನು ಉಚಿತವಾಗಿ ನೀಡದೆ, ದೊಡ್ಡ ಮೊತ್ತಕ್ಕೆ ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಿಬಿಐ ತನಿಖೆ ಆರಂಭಿಸಿದೆ.

ಇದರ ನಡುವೆ ಪರೀಕ್ಷೆ ರದ್ದಾಗಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಆತಂಕದಲ್ಲಿದ್ದು, ಶೀಘ್ರದಲ್ಲೇ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸುವುದಾಗಿ ಎನ್‌ಟಿಎ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !