ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ರಾಷ್ಟ್ರಪತಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

18ನೇ ಲೋಕಸಭೆಯ ಮೊದಲ ಅಧಿವೇಶನದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದ್ದಾರೆ.

ಈ ವೇಳೆ ಅವರು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಪ್ರಸ್ತಾವಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಪ್ರಕ್ರಿಯೆಯನ್ನು ಸುಧಾರಿಸುವತ್ತ ಸರ್ಕಾರದ ಗಮನ ಹರಿಸಲಿದೆ ಎಂದು ರಾಷ್ಟ್ರಪತಿ ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಲವು ರಾಜ್ಯಗಳಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಿ ನೇಮಕಾತಿಗಳು ಮತ್ತು ಪರೀಕ್ಷೆಗಳಲ್ಲಿ ಪಾವಿತ್ರ್ಯತೆ, ಪಾರದರ್ಶಕತೆ ಅತ್ಯಗತ್ಯ. ನ್ಯಾಯಯುತ ತನಿಖೆ ನಡೆಸಲು ಮತ್ತು ಇತ್ತೀಚಿನ ಪ್ರಶ್ನೆ ಪತ್ರಿಕೆ ಸೋರಿಕೆಯ ಘಟನೆಗಳಲ್ಲಿ ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!