ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈದ್ಯರಾಗಬೇಕೆಂಬ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು. ವೈದ್ಯಕೀಯ ಸೀಟು ಕೊಡಿಸುತ್ತೇವೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ.
ಹೇಗಾದರೂ ಮಾಡಿ ಒಳ್ಳೆಯ ಕಾಲೇಜಿನಲ್ಲಿ ಸೀಟು ಪಡೆಯಬೇಕು ಎಂಬ ಆತುರಕ್ಕೆ ಬರಬೇಡಿ. ನಿಮ್ಮ ಆತಂಕವನ್ನು ದುರುಪಯೋಗಪಡಿಸಿಕೊಳ್ಳಲು ಮಧ್ಯವರ್ತಿಗಳು ಕಾದಿರುತ್ತಾರೆ ಎಂದು ಸಲಹೆ ನೀಡಿದ್ದಾರೆ.