October 15, 2026
Thursday, October 15, 2026
spot_img

ನೀಟ್ ವ್ಯವಸ್ಥೆಯೇ ಒಂದು ಹಗರಣ: ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಎಂ.ಕೆ. ಸ್ಟಾಲಿನ್ ಆಕ್ರೋಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿದ್ದು, ನೀಟ್ ವ್ಯವಸ್ಥೆಯೇ ಒಂದು ಹಗರಣ ಎಂದು ತಮಿಳುನಾಡು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಈ ವರ್ಷವೂ ಕೂಡ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದ್ದಾರೆ. ಪ್ರತಿಯೊಂದು ಹಂತದಲ್ಲೂವಂಚನೆ ನಡೆಯುತ್ತಿದೆ. ನೀಟ್ ಪರೀಕ್ಷಾ ಪ್ರಕ್ರಿಯೆಯೇ ಒಂದು ದೊಡ್ಡ ಹಗರಣ ಎಂದು ಆರೋಪಿಸಿದ್ದಾರೆ.

ನೀಟ್ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. 12ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಎಂಬಿಬಿಎಸ್ ಸೀಟುಗಳನ್ನು ಹಂಚಿಕೆ ಮಾಡುವ ಹಳೆಯ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ತಮಿಳುನಾಡಿನ ನೂತನ ಸರಕಾರದ ಮುಂದೆ ಹೊಸ ಬೇಡಿಕೆ ಇತ್ತ ಸ್ಟಾಲಿನ್, ನೀಟ್ ಪರೀಕ್ಷೆಯ ವಿರುದ್ಧ ತನ್ನ ದೃಢ ನಿಲುವನ್ನು ಸ್ಪಷ್ಟಪಡಿಸಬೇಕು. ತಮ್ಮ ಸರ್ಕಾರ ಮಾಡಿದ ಕಾನೂನು ಪ್ರಯತ್ನಗಳನ್ನು ಮುಂದುವರಿಸಬೇಕೆಂದು ಎಂದು ಆಗ್ರಹಿಸಿದ್ದಾರೆ.

Must Read