Sunday, October 1, 2023

Latest Posts

ವರ್ಷಕ್ಕೆ ಎರಡು ಬಾರಿ ನೀಟ್ ಪರೀಕ್ಷೆ?: ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನೀಟ್ ಪರೀಕ್ಷೆ ಕುರಿತು ಉಂಟಾದ ಗೊಂದಲಗಳಿಗೆ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಸುಭಾಷ್ ಸರ್ಕಾರ್ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭೆಯಲ್ಲಿ ತೆಲುಗು ದೇಶಂ ಪಕ್ಷದ ಸಂಸದ ಗಲ್ಲಾ ಜಯದೇವ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವರ್ಷಕ್ಕೆ ಎರಡು ಬಾರಿ ನೀಟ್ ಪರೀಕ್ಷೆ ನಡೆಸುವ ಯಾವುದೇ ಪ್ರಸ್ತಾಪವನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ತಳ್ಳಿಹಾಕಿದೆ ಎಂದು ತಿಳಿಸಿದ್ದಾರೆ.

ಕಳೆದ 10 ವರ್ಷಗಳಲ್ಲಿ ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. 2014ರಲ್ಲಿ 6,58,040 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. 2023ರಲ್ಲಿ 20,38,597 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ವರ್ಷಕ್ಕೆ ಎರಡು ಬಾರಿ ನೀಟ್ ಪರೀಕ್ಷೆ ನಡೆಸುವ ಪ್ರಸ್ತಾಪ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!