October 15, 2026
Thursday, October 15, 2026
spot_img

ನೀಟ್‌ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದ ಎನ್‌ಟಿಎ ಎಕ್ಸ್‌ಪರ್ಟ್‌ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನೀಟ್‌ ಯುಜಿ ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಲೀಕ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ.

ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್‌ ಹೀರಾಲಾಲ್‌ ಸರಾಫ್‌ ಪ್ರಶಾಲಾದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮನೀಷ್‌ ಸಂಜಯ್‌ ಹವಾಲ್ದಾರ್‌ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಜ್ಞರಾಗಿ ನೇಮಕವಾಗಿದ್ದರು. ಇನ್ನು ಕೇಂದ್ರೀಯ ಸಂಸ್ಥೆಯ ವಿಚಾರಣೆ ವೇಳೆ ಆರೋಪಿಯನ್ನು ಬಂಧಿಸಲಾಗಿದೆ.

ಈಗಾಗಲೇ ಅರೆಸ್ಟ್‌ ಆಗಿರುವ ಸಹ ಆರೋಪಿ ಮನೀಷಾ ಮಾಂಧರೆ ಜೊತೆ ಪರೀಕ್ಷೆಯ ಪತ್ರಿಕೆಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಹಂಚಿದ್ದ ಪತ್ರಿಕೆಗಳಿಗೂ ಪರೀಕ್ಷೆಯಲ್ಲಿ ಬಂದ ಪ್ರಶ್ನೆಗಳಿಗೂ ಸಾಮ್ಯತೆ ಇದೆ. ಹೀಗಾಗಿ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಇವರ ಪಾತ್ರ ನಿರ್ಣಾಯಕವಾಗಿ ಕಂಡುಬಂದಿದೆ.

Must Read