July 8, 2026
Wednesday, July 8, 2026
spot_img

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಐದು ಆರೋಪಿಗಳನ್ನು ಬಂಧಿಸಿದ ಸಿಬಿಐ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಯುಜಿ ಪರೀಕ್ಷೆಯಲ್ಲಿನ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಚುರುಕುಗೊಳಿಸಿದ್ದು, ಐದು ಆರೋಪಿಗಳನ್ನು ಬಂಧಿಸಿದೆ.

ಶಿಕ್ಷಣ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆಯ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆಗೆ ಇಳಿದ ಸಿಬಿಐ, ಜೈಪುರದಿಂದ ಮೂವರು, ಗುರುಗ್ರಾಮ ಮತ್ತು ನಾಸಿಕ್‌ನಿಂದ ತಲಾ ಒಬ್ಬ ಆರೋಪಿಯನ್ನು ಬಂಧಿಸಿದೆ. ಬಂಧಿತರಿಂದ ಮೊಬೈಲ್ ಫೋನ್‌ಗಳು ಸೇರಿದಂತೆ ಹಲವಾರು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

ತನಿಖಾ ಸಂಸ್ಥೆಯ ಪ್ರಕಾರ, ತಾಂತ್ರಿಕ ಮತ್ತು ವಿಧಿವಿಜ್ಞಾನ ವಿಶ್ಲೇಷಣೆಯ ಆಧಾರದ ಮೇಲೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಶಂಕಿತರ ಪಾತ್ರವನ್ನು ಸಹ ತನಿಖೆ ಮಾಡಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !