October 15, 2026
Thursday, October 15, 2026
spot_img

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ: ಎಫ್‌ಐಆರ್ ದಾಖಲಿಸಿದ ಸಿಬಿಐ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನೀಟ್-ಯುಜಿ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರವು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಿದ್ದು, ಈ ಬೆನ್ನಲ್ಲೇ ಸಿಬಿಐ ಕೇಂದ್ರ ಶಿಕ್ಷಣ ಸಚಿವಾಲಯದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಹಗರಣದ ಮೂಲ ಪತ್ತೆಹಚ್ಚಲು ಬಿಹಾರ, ಗುಜರಾತ್ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಿಗೆ ಸಿಬಿಐ ವಿಶೇಷ ತಂಡಗಳನ್ನು ರವಾನಿಸಲಾಗಿದೆ.

ಇದರ ನಡುವೆ ಹಗರಣದ ಮುಖ್ಯ ಸೂತ್ರಧಾರಿಗಳಲ್ಲಿ ಓರ್ವನನ್ನು ಬಂಧಿಸಿದ್ದಾರೆ. ಸಿಬಿಐ ಅಧಿಕಾರಿಗಳು ಈತನನ್ನು ಹೈದರಾಬಾದ್‌ನಲ್ಲಿ ಸೆರೆಹಿಡಿದಿದ್ದಾರೆ. ಬಂಧಿತ ಆರೋಪಿಯು ಹಲವು ರಾಜ್ಯಗಳಲ್ಲಿ ಪರೀಕ್ಷಾ ಮಾಫಿಯಾದೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ.

ಇಗ್ಗಾಲಿ ಅಕ್ರಮಗಳ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ. ಶೀಘ್ರದಲ್ಲೇ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ.

Must Read