ಹೊಸದಿಗಂತ ವರದಿ, ಕಲಬುರಗಿ:
ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯ ಶಾಲೆಯಲ್ಲಿ ಬಿಸಿ ಊಟ ವಿತರಣೆಯಲ್ಲಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಜಿಲ್ಲೆಯ ಅಫಜಲಪೂರ ತಾಲೂಕಿನ ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕನನ್ನು ಅಮಾನತ್ತುಗೊಳಿಸಿ ಡಿ.ಡಿ.ಪಿ.ಐ ಸಕ್ರೆಪ್ಪಗೌಡ್ ಬಿರಾದಾರ್ ಆದೇಶ ಹೊರಡಿಸಿದ್ದಾರೆ.
ಅಫಜಲಪುರ ತಾಲೂಕಿನ ಚಿಣಮಗೇರಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಸಾಂಬಾರ್ ಪಾತ್ರೆ ಬಿದ್ದು ೨ನೇ ತರಗತಿ ಮಹಾಂತಮ್ಮಾ ಎಂಬ ವಿದ್ಯಾರ್ಥಿನಿಗೆ ಸುಟ್ಟು ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ ಲಾಲ್ ಬಿ ನದಾಫ್,ಸಹ ಶಿಕ್ಷಕ ರಾಜು ಚೌವಾಣ್ ಅವರ ಕರ್ತವ್ಯ ಲೋಪದಿಂದ ಈ ಘಟನೆ ನಡೆದಿದ್ದು,ಇದೀಗ ಈ ಇಬ್ಬರು ಶಿಕ್ಷಕರು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.