Sunday, January 11, 2026

ಕರ್ತವ್ಯ ಲೋಪ: ಪುತ್ತೂರು ನಗರ ಪೊಲೀಸ್ ಠಾಣೆ ಎಎಸ್ಸೈ ಅಮಾನತು

ಹೊಸದಿಗಂತ ವರದಿ ಪುತ್ತೂರು:

ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಎಎಸ್‌ಐ ಮೋನಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.

ಜ.8ರಂದು ರಾತ್ರಿ ಕೆದಿಲ ಗ್ರಾಮದ ಸತ್ತಿಕಲ್ಲು ಪ್ರದೇಶದಲ್ಲಿ ನಡೆದ ಹಲ್ಲೆ ಘಟನೆಯ ಕುರಿತು ಕರ್ತವ್ಯದಲ್ಲಿದ್ದ ಎಎಸ್‌ಐ ಮೋನಪ್ಪ ಅವರು ಮೇಲಾಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡದೇ, ಮಾರನೇ ದಿನ ಬೆಳಗ್ಗೆ ಮಾತ್ರ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪ ಹೊರಿಸಿ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ರಸಗೊಬ್ಬರ ಉತ್ಪಾದನೆಯಲ್ಲಿ ದೇಶೀಯ ಬಲವರ್ಧನೆ: 73% ಬೇಡಿಕೆ ದೇಶದಲ್ಲೇ ಪೂರೈಕೆ

ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಗಂಭೀರ ಹಲ್ಲೆ ಘಟನೆಯನ್ನು ಇನ್ಸ್ಪೆಕ್ಟರ್ ಹಾಗೂ ಮೇಲಾಧಿಕಾರಿಗಳಿಗೆ ತಕ್ಷಣವೇ ತಿಳಿಸಬೇಕಾದರೂ ಅದರಲ್ಲಿ ವಿಳಂಬವಾಗಿದೆ ಎಂದು ಇಲಾಖೆಯ ಆಂತರಿಕ ಪರಿಶೀಲನೆಯಲ್ಲಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಎಎಸ್‌ಐ ಮೋನಪ್ಪ ಅವರನ್ನು ಅಮಾನತಿನಲ್ಲಿಡುವ ಆದೇಶ ನೀಡಲಾಗಿದೆ ಎಂದು ತಿಳಿದು ಬಂದಿದೆ.

error: Content is protected !!