ಜೀವಬಲಿ ಪಡೆದ ಪ್ಲೈಓವರ್ ಕಾಮಗಾರಿ ನಿರ್ಲಕ್ಷ್ಯ: ಗಾಯಾಳು ಎಎಸ್‌ಐ ಚಿಕಿತ್ಸೆ ಫಲಕಾರಿಯಾಗದೆ ಸಾವು

ಹೊಸದಿಗಂತ, ಹುಬ್ಬಳ್ಳಿ:
ಹಳೇ ಕೋರ್ಟ್ ಬಳಿಯಲ್ಲಿ ತೆರಳುತ್ತಿದ್ದಾಗ ಪ್ಲೈಓವರ್ ಕಾಮಗಾರಿಯ ಕಬ್ಬಿಣದ ರಾಡ್ ತಲೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎಎಸ್‌ಐ ನಾಭಿರಾಜ್ ದಯಣ್ಣವರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಳೆದ ಸೆ.೧೦ ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಭದ್ರತಾ ಕರ್ತವ್ಯ ನಿರ್ವಹಿಸಿ ಠಾಣೆಗೆ ತೆರಳುತ್ತಿದ್ದ ನಾಭಿರಾಜ್ ದಯಣ್ಣವರ ಮೇಲೆ ಕೋರ್ಟ್ ವೃತ್ತದ ಬಳಿಯ ಪ್ಲೈಓವರ್ ಕಾಮಗಾರಿ ಸ್ಥಳದಲ್ಲಿ ಮೇಲಿನಿಂದ ಕಬ್ಬಿಣದ ರಾಡ್ ಬಿದಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಎಎಸ್‌ಐ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತಿತ್ತು. ಪ್ಲೈಓವರ್ ಕಾಮಗಾರಿ ನಡೆಸುವ ವೇಳೆ ನಿರ್ಲಕ್ಷ್ಯ ವಹಿಸಿದ ಝಂಡು ಕನ್ಸಕ್ಷನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಎಸ್ಐ ನಾಭಿರಾಜ್ ಬೆಳಗಿನ ನಾಲ್ಕು ಗಂಟೆಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಧಾರವಾಡದ ಸತ್ತೂರಿನ‌ ನಿವಾಸಿಯಾಗಿರುವ ದಯಣ್ಣವರ ಒಂದು ವರ್ಷದಿಂದ ಉಪನಗರ ಠಾಣೆಯಲ್ಲಿ ಎಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!