ದಿಗಂತ ವರದಿ ಹುಬ್ಬಳ್ಳಿ:
ವಿದ್ಯಾರ್ಥಿ ನೇಹಾ ಹಿರೇಮಠ ಅವರ ಕೊಲೆ ಪ್ರಕರಣ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದರು.
ಎ. 18ರಂದು ಇಲ್ಲಿನ ವಿದ್ಯಾನಗರದ ಪ್ರತಿಷ್ಠಿತ ಕಾಲೇಜಿನ ಆವರಣದಲ್ಲೇ ನೇಹಾಳ ಹಳೆಯ ಸಹಪಾಠಿ ಸವದತ್ತಿ ಮೂಲದ ಫಯಾಜ್ ಎಂಬಾತನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.
ಕೊಲೆಯಾದ ನೇಹಾಳು ಫಯಾಜ್‌ನ ಪ್ರೀತಿ ನಿರಾಕರಿಸಿದ್ದಳು. ಇದರಿಂದ ಸಿಟ್ಟಾಗಿದ್ದ ಅವನು ತನ್ನ ಹಳೆ ಸಹಪಾಠಿಯನ್ನು ಕೊಲೆ ಮಾಡಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸೋಮವಾರ ಸಿಐಡಿ ಡಿವೈಎಸ್‌ಪಿ ಎನ್.ಎಚ್. ಪೈಕ್ ಅವರು ಸ್ಥಳೀಯ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮತ್ತು 3ನೇ ಜೆಎಂಎಫ್‌ಸಿ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದರು.