ನೇಹಾ ಹಿರೇಮಠ ಹತ್ಯೆ ಪ್ರಕರಣ: ಆರೋಪಿ ಫಯಾಜ್‌ ಸಿಐಡಿ ವಶಕ್ಕೆ

ದಿಗಂತ ವರದಿ ಹುಬ್ಬಳ್ಳಿ:

ವಿದ್ಯಾರ್ಥಿ ಹತ್ಯೆ ಪ್ರಕರಣ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು ಬುಧವಾರ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್ ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.‌

ಎಸ್ಪಿ ವೆಂಕಟೇಶ ನೇತೃತ್ವದ ತಂಡ ಮಂಗಳವಾರ ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ‌ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!