ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಕಾಲೇಜಿನಿಂದ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್ ನನ್ನು ಕಾಲೇಜಿನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲೀಕ್ ಹೋರಾಟ ಮಾಡಿದ್ದರು.ಇದೀಗ ಕೊಲೆ ಆರೋಪಿ ವಿದ್ಯಾರ್ಥಿ ಫಯಾಜ್ ಅಮಾನತು ಮಾಡಿಸಿ ಅಮಾನತು ಪತ್ರ ಪಡೆದುಕೊಂಡಿದ್ದಾರೆ.

ಪಿಸಿ ಜಾಬಿನ್ ಕಾಲೇಜ್​ನಲ್ಲಿ ಫಯಾಜ್ 2022ರಲ್ಲಿ​​ BCA ವ್ಯಾಸಂಗ ಮಾಡುತಿದ್ದ. 5 ಮತ್ತು 6ನೇ ಸೆಮಿಸ್ಟರ್​ನಲ್ಲಿ ಕೆಲ ವಿಷಯಗಳಲ್ಲಿ ಫೇಲ್ ಕೂಡ ಆಗಿದ್ದ. ಇನ್ಮುಂದೆ ಫಯಾಜ್ ಕಾಲೇಜ್​ಗೆ ಬರಲು ಬಿಡಲ್ಲ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಕಳೆದ ವರ್ಷ ಏ.18ರಂದು ನೇಹಾ ಅವರ ಕಾಲೇಜಿನ ಆವರಣದಲ್ಲೇ ಹಂತಕ ಫೈಯಾಜ್​ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದ. ಈ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!