ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಮಹಿಳಾ ನ್ಯಾಯಾಧೀಶರಾದ ಪಲ್ಲವಿ ಬಿಆರ್ ಮಹತ್ವದ ಆದೇಶ ನೀಡಿದ್ದಾರೆ. ಆರೋಪಿ ಪರವಾಗಿ ಬೆಳಗಾವಿಯ ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಆರೋಪಿ ಫಯಾಜ್, ಜಾಮೀನಿಗಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ನೀಡಿ ಎಂದು ಬೇಡಿಕೆ ಇಟ್ಟಿದ್ದ. ಇದೀಗ ಈ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿ ಫಯಾಜ್‌ಗೆ ಇದೇ ತಿಂಗಳ 6ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ.